ರೋಹಿಣಿ ಸಿಂಧೂರಿ ಕ್ಯಾನ್ಸರ್ ಇದ್ದ ಹಾಗೆ, ಎಲ್ಲರನ್ನೂ ಬುಟ್ಟಿಗೆ ಹಾಕೊಳ್ತಾಳೆ: ಡಿ.ರೂಪಾ ಅವರದ್ದೆನ್ನಲಾದ ಆಡಿಯೋ ವೈರಲ್

ಬೆಂಗಳೂರು ಫೆ.22 : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿ ಇದೀಗ ರೋಹಿಣಿ ಸಿಂಧೂರಿ ಕ್ಯಾನ್ಸರ್ ಇದ್ದ ಹಾಗೆ, ಎಲ್ಲರನ್ನೂ ಬುಟ್ಟಿಗೆ ಹಾಕೊಳ್ತಾಳೆ ಎಂದಿರುವ ಐಪಿಎಸ್ ಅಧಿಕಾರಿ ಡಿ.ರೂಪಾ ಅವರದ್ದು ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ನಡುವೆ ನಡೆದಿದ್ದು ಎನ್ನಲಾದ ಸಂಭಾಷಣೆಯ ಈ ವೈರಲ್ ಆಡಿಯೋದಲ್ಲಿ ರೋಹಿಣಿ ಸಿಂಧೂರಿಯವರು ತಮ್ಮ ಪ್ರಭಾವ ಬಳಸಿಕೊಂಡು ತಮ್ಮ ಪತಿಯ ಅಣ್ಣನನ್ನು ಬಿಜೆಪಿಗೆ ಸೇರಿಸುವ ಸಿದ್ಧತೆಯನ್ನು ಮಾಡುತ್ತಿದ್ದಾಳೆ. ಒಂದು ಫೌಂಡೇಶನ್ ಅಂತ ಮಾಡಿ ಒಂದು ಕಾರ್ಯಕ್ರಮ ಆಯೋಜನೆ ಮಾಡಿದ್ದಳು. ಆ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆ ಮತ್ತು ಸ್ವಾಮೀಜಿಯೊಬ್ಬರನ್ನು ಕರೆಸಿದ್ದರು. ಇದನ್ನು ನನ್ನ ಪತಿ ಅವರ ಬಳಿಯೇ ಹೇಳಿಕೊಂಡಿದ್ದಾಳೆ. ಫೌಂಡೇಶನ್ ಉದ್ದೇಶ ಏನು ಅಂತ ನನ್ನ ಪತಿ ಕೇಳಿದಾಗ, ‘ಫೌಂಡೇಶನ್ ಉದ್ದೇಶ ಸದ್ಯಕ್ಕೆ ಚಾರಿಟಿ ಆದರೆ, ರಾಜಕೀಯ ಪಕ್ಷ ಸೇರಿ ಬಿಜೆಪಿಯಿಂದ ಟಿಕೆಟ್ ಪಡೆಯೋದು’ ಎಂದು  ಆಕೆ ಹೇಳಿಕೊಂಡಿದ್ದಾಳೆ ಎಂದು ಡಿ. ರೂಪಾ  ಆರೋಪಿಸಿದ್ದಾರೆ. 

ರೋಹಿಣಿ ಫ್ಯಾಮಿಲಿದು ಲ್ಯಾಂಡ್ ಬ್ಯುಸಿನೆಸ್, ರಿಯಲ್ ಎಸ್ಟೇಟ್ ಬ್ಯುಸಿನೆಸ್. ಕಬಿನಿ ಹತ್ತಿರ ಒಂದು ಲ್ಯಾಂಡ್ ಇದೆ ಅಂತಾ ಪಹಣಿ ಕೊಟ್ಟಿದ್ದಾರೆ.  ನನ್ನ ಪತಿ ಲ್ಯಾಂಡ್ ರೆಕಾರ್ಡ್ಸ್ ನಲ್ಲಿ ಇರೋದ್ರಿಂದ ಹೆಲ್ಪ್ ತಗೋಂಡಿದ್ದಾಳೆ. ಯಾರೋ ಬುಜ್ಜಮ್ಮ ಅನ್ನೋರ ಲ್ಯಾಂಡ್ ಎಷ್ಟೋ ಜನರ ಹೆಸರಲ್ಲಿದೆ ತಗೋಬಹುದಾ ಅಂತಾ  ಅಭಿಪ್ರಾಯ  ಕೇಳಿದ್ದಾಳೆ. ಆ ಲ್ಯಾಂಡ್, ಈ ಲ್ಯಾಂಡ್ ಅಂಥ ನಮ್ಮವರಿಂದ ರೋಹಿಣಿ ಸಿಂಧೂರಿ ಮಾಹಿತಿ ಪಡೆಯುತ್ತಿದ್ದಾಳೆ.‌ ಆಯಮ್ಮನ ದಿಸೆಯಿಂದ ನಮ್ಮ ಕುಟುಂಬ ಚೆನ್ನಾಗಿಲ್ವಲ್ಲ ಈಗ. ನಾನು ಅವರನ್ನ ಅಲ್ಲಿ ಇರೋಕೆ ಬಿಡಲ್ಲ. ನಾನೇ ಟ್ರಾನ್ಸ್ ಫರ್ ಗೆ ರಿಕ್ವೆಸ್ಟ್ ಮಾಡಿದ್ದೀನಿ. ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ. ಡಿಕೆ ರವಿ ವಿಷ್ಯದಲ್ಲೂ ಆಗಿದ್ದು ಹಾಗೆನೇ. ನಾವು ನೋಡಿದ್ದೀವಲ್ಲ ಎಂದು ಆರೋಪ ಮಾಡಿರುವುದನ್ನು ಕೇಳಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!