ಹಿರಿಯ ನಟ, ಮಾಜಿ ಸಚಿವ ಅನಂತ್ ನಾಗ್ ಇಂದು ಬಿಜೆಪಿಗೆ?

ಬೆಂಗಳೂರು ಫೆ.22: ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಅವರು ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಇಂದು ಸಂಜೆ 4.30ಕ್ಕೆ ಮಲ್ಲೇಶ್ವರಂ ಬಿಜೆಪಿ (BJP) ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಮ್ಮುಖದಲ್ಲಿ ಅನಂತ್ ನಾಗ್ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಈ ವೇಳೆ ಸಚಿವ ಮುನಿರತ್ನ, ಡಾ‌. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ ಎಂದು ತಿಳಿಸಲಾಗಿದೆ.

ಈ ಹಿಂದೆ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅನಂತ್ ನಾಗ್ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದರು. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​​ ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.

Leave a Reply

Your email address will not be published. Required fields are marked *

error: Content is protected !!