ಹಿಜಾಬ್ ಕುರಿತ ಅರ್ಜಿ ತುರ್ತು ವಿಚಾರಣೆ: ಸಿಜೆಐ ಭರವಸೆ
ನವದೆಹಲಿ ಫೆ.22: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಪ್ರಶ್ನಿಸಿ ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನೀಡುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಲು ಕೋರಿ ಸಲ್ಲಿಸಿರುವ ಅರ್ಜಿಯನ್ನು ಪಟ್ಟಿ ಮಾಡಲು ಸೂಚಿಸುವುದಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ತಿಳಿಸಿದ್ದಾರೆ.
ಮಾರ್ಚ್ 9 ರಿಂದ ಪರೀಕ್ಷೆಗಳು ಪ್ರಾರಂಭವಾಗಲಿವೆ. ಆದ್ದರಿಂದ ಈ ಕುರಿತ ಮೇಲ್ಮನವಿಯನ್ನು ಪರಿಗಣಿಸಬೇಕು ಎಂದು ವಕೀಲ ಶಾದನ್ ಫರಾಸ್ಟ್ ಅವರು ಸಿಜೆಐ ಮುಂದೆ ಇಂದು ವಿಷಯ ಪ್ರಸ್ತಾಪಿಸಿದರು. ಹಾಗೂ ಅವರು ಈಗಾಗಲೇ ಒಂದು ವರ್ಷವನ್ನು ಕಳೆದುಕೊಂಡಿದ್ದಾರೆ. ಅವರು ಇನ್ನೂ ಒಂದು ವರ್ಷವನ್ನು ಕಳೆದುಕೊಳ್ಳಲು ಬಯಸುವುದಿಲ್ಲ. ಅವರಿಗೆ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು ಎಂಬುದಷ್ಟೇ ನಮ್ಮ ಮನವಿ. ನಾನು ಬೇರೆ ಯಾವುದೇ ನಿರ್ದೇಶನಗಳನ್ನು ಬಯಸುತ್ತಿಲ್ಲ” ಎಂದು ಹೇಳಿದರು.
ಈ ವೇಳೆ ಪ್ರತಿಕ್ರಿಯಿಸಿದ ಸಿಜೆಐ ಅವರು ನಾನು ಈ ಬಗ್ಗೆ ಗಮನ ಹರಿಸುತ್ತೇನೆ” ಎಂದು ಭರವಸೆ ನೀಡಿದರು.