ಉತ್ತರ ಪ್ರದೇಶ: ಸರಣಿ ಅಪಘಾತ 10 ಮಂದಿ ಸಾವು

ಉತ್ತರ ಪ್ರದೇಶ : ಟ್ರಕ್, ಬಸ್ ಹಾಗೂ ಮತ್ತೊಂದು ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಆಗ್ರಾ ಹಾಗೂ ಮೊರಾದಾಬಾದ್ ಹೈ ವೇಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಘಟನೆಗೆ ಸಂಬಂಧಿಸಿ ಸ್ಥಳಕ್ಕೆ  ವಿಧಿವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದು, ಓವರ್ ಟೇಕ್ ಮಾಡುವಾಗ ಅವಘಡ ಸಂಭವಿಸಿರುವ ಕುರಿತು ಪ್ರತ್ಯಕ್ಷದರ್ಶಿ ಮಾಹಿತಿ ನೀಡಿರುವುದಾಗಿ ಮೊರಾದಾಬಾದ್ ಎಸ್‌ಎಸ್‌ಪಿ ಮಾಹಿತಿ ನೀಡಿದ್ದಾರೆ. ಇನ್ನು ಮೃತರ ಕುಟುಂಬಸ್ಥರಿಗೆ 2 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘೋಷಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!