ಪ್ರಶ್ನಿಸದಿದ್ದರೆ ಇನ್ನೂ ಹಲವು ಕುಟುಂಬಗಳು ನಾಶವಾಗುತ್ತವೆ: ಡಿ. ರೂಪಾ
ಬೆಂಗಳೂರು ಫೆ.22 : ಐಪಿಎಸ್ ಅಧಿಕಾರಿ ಡಿ.ರೂಪಾ ಮಾತಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಬೆನ್ನಲ್ಲೇ ಡಿ.ರೂಪಾ ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡು ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಚಾರವಾಗಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿರುವ ಅವರು, “Dear media, ದಯವಿಟ್ಟು ನಾನು ರೋಹಿಣಿ ಸಿಂಧೂರಿ ವಿರುದ್ಧ ಎತ್ತಿದ ಭ್ರಷ್ಟಾಚಾರದ ವಿಷಯದ ಬಗ್ಗೆ ಗಮನಹರಿಸಿ. ಜನಸಾಮಾನ್ಯರ ಮೇಲೆ ಹೆಚ್ಚು ಪರಿಣಾಮ ಬೀರುವ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಯಾರನ್ನೂ ನಾನು ತಡೆದಿಲ್ಲ. ಅದೇ ರೀತಿ, ಕರ್ನಾಟಕದಲ್ಲಿ ಒಬ್ಬ ಐಎಎಸ್ ಅಧಿಕಾರಿ ಮೃತಪಟ್ಟಿದ್ದಾರೆ, ಹಾಗೂ ತಮಿಳುನಾಡಿನಲ್ಲಿ ಒಬ್ಬ ಐಪಿಎಸ್ ಅಧಿಕಾರಿ ಮೃತಪಟ್ಟಿದ್ದಾರೆ, ಕರ್ನಾಟಕದಲ್ಲಿ ಒಬ್ಬ ಐಎಎಸ್ ಪತಿ-ಪತ್ನಿ ಈಗಾಗಲೇ ವಿಚ್ಛೇದನ ಪಡೆದಿದ್ದಾರೆ. ನಾನು ಮತ್ತು ನನ್ನ ಪತಿ ಇನ್ನೂ ಒಟ್ಟಿಗೆ ಇದ್ದೇವೆ. ನಾವು ಇನ್ನೂ ಕುಟುಂಬವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ. ಕುಟುಂಬಕ್ಕೆ ಕಂಟಕಪ್ರಾಯವಾಗುವುವರನ್ನು ದಯವಿಟ್ಟು ಪ್ರಶ್ನಿಸಿ. ಇಲ್ಲದಿದ್ದರೆ ಇನ್ನೂ ಹಲವು ಕುಟುಂಬಗಳು ನಾಶವಾಗುತ್ತವೆ” ಎಂದು ಹೇಳಿದ್ದಾರೆ.
ಹಾಗೂ “ನಾನು ಧೈರ್ಯವಂತ ಮಹಿಳೆ, ನಾನು ಹೋರಾಡುತ್ತೇನೆ. ಎಲ್ಲಾ ಮಹಿಳೆಯರಿಗೂ ಹೋರಾಟ ಮಾಡುವ ಶಕ್ತಿ ಇರುವುದಿಲ್ಲ. ದಯವಿಟ್ಟು ಅಂತಹ ಮಹಿಳೆಯರಿಗೆ ಧ್ವನಿಯಾಗಿರಿ. ಭಾರತವು ಕೌಟುಂಬಿಕ ಮೌಲ್ಯಗಳಿಗೆ ಹೆಸರುವಾಸಿಯಾಗಿದೆ. ಅದನ್ನು ಮುಂದುವರಿಸೋಣ” ಎಂದು ರೂಪಾ ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.