ಉಡುಪಿ: ಬಾವಿಗೆ ಬಿದ್ದು ಮಹಿಳೆ ಮೃತ್ಯು

ಉಡುಪಿ ಫೆ.22 (ಉಡುಪಿ ಟೈಮ್ಸ್ ವರದಿ) : ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಕಡಿಯಾಳಿಯಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ವಸಂತಿ ಶೆಟ್ಟಿ (67) ಮೃತಪಟ್ಟವರು. ಇವರು ನಿನ್ನೆ ಮಧ್ಯಾಹ್ನದ ವೇಳೆ ಮನೆಯ ಬಾವಿಯಿಂದ ನೀರು ತರಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಮಗಳು ನಮಿತಾ ಜೆ ಶೆಟ್ಟಿ ಅವರು ನೀಡಿದ ಮಾಹಿತಿಯಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!