ಕುಂದಾಪುರ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕುಂದಾಪುರ ಫೆ.22(ಉಡುಪಿ ಟೈಮ್ಸ್ ವರದಿ) : ತಾಲೂಕಿನ ಬೀಜಾಡಿ ಗ್ರಾಮದ  ಬ್ಯಾಲಿಹಿತ್ಲು ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸ್ಥಳೀಯ ನಿವಾಸಿ ಸುರೇಶ್‌  (44 ) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದ ಅವರು,  ಯಾವುದೋ ವಿಷಯಕ್ಕೆ ಮನನೊಂದು ನಿನ್ನೆ ಬೆಳಿಗ್ಗೆಯಿಂದ ಸಂಜೆಯ ಅವಧಿಯಲ್ಲಿ ತಮ್ಮ ಹೆಂಡತಿ ಗೀತಾ ಕೆಲಸಕ್ಕೆ ಹೋದ ಸಮಯದಲ್ಲಿ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ತಮ್ಮ ನೀಡಿದ ಮಾಹಿತಿಯಂತೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!