ಮಣಿಪಾಲ: ಮಾದಕ ವಸ್ತು ಸೇವನೆ- 42 ವಿದ್ಯಾರ್ಥಿಗಳು ಅಮಾನತು

ಮಣಿಪಾಲ ಫೆ.23(ಉಡುಪಿ ಟೈಮ್ಸ್ ವರದಿ): ಮಾದಕ ವಸ್ತು ಸೇವನೆ ಪ್ರಕರಣಗಳಲ್ಲಿ ಒಳಗೊಂಡಿರುವ ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ 42 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಮೂಲಗಳು ತಿಳಿಸಿವೆ.

ಕಳೆದ ಒಂದು ತಿಂಗಳಲ್ಲಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಸೇವನೆ ಪ್ರಕರಣಗಳಲ್ಲಿ ಒಟ್ಟು 42 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಇದರ ಆಧಾರದಲ್ಲಿ ಮಾದಕ ದ್ರವ್ಯ ಸೇವನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸಿರುವ ಮಾಹೆ ವಿಶ್ವ ವಿದ್ಯಾಲಯವು ಈ ವಿದ್ಯಾರ್ಥಿಗಳನ್ನು ಆಂತರಿಕವಾಗಿ ತನಿಖೆ ಮಾಡಿ ಮತ್ತು ಸಂಪೂರ್ಣ ತನಿಖೆ ಪೂರ್ಣಗೊಳ್ಳುವವರೆಗೆ ವಿಶ್ವವಿದ್ಯಾಲಯದಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!