ಮಂಗಳೂರು: ಪೊಲೀಸ್ ಅಧಿಕಾರಿಯಿಂದಲೇ ಲೈಂಗಿಕ ಕ್ರಿಯೆಗೆ ಆಹ್ವಾನ : ಮಂಗಳಮುಖಿರ ಆರೋಪ

ಮಂಗಳೂರು ಫೆ.24 : ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತನ್ನನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾರೆ ಎಂದು ಲಿಂಗತ್ವ ಅಲ್ಪಸಂಖ್ಯಾತರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ನಗರದ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಜಾಗೃತಿ, ಅರಿವು ಕಾರ್ಯಾಗಾರದಲ್ಲಿ ನ್ಯಾಯಾಧೀಶರ ಮುಂದೆ ತಮ್ಮ ಸಮಸ್ಯೆಯನ್ನು ಹೇಳಿಕೊಂಡ ಲಿಂಗತ್ವ ಅಲ್ಪಸಂಖ್ಯಾತೆಯೊಬ್ಬರು, ಪೊಲೀಸ್‌ ಹಿರಿಯ ಅಧಿಕಾರಿಯೊಬ್ಬರು ರಾತ್ರಿ ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿ ಈ ರೀತಿ ವರ್ತಿಸಿದಾಗ ನಾವು ಏನು ಮಾಡುವುದು? ಯಾರಿಗೆ ದೂರು ನೀಡುವುದು ಎಂದು ಕೇಳಿದ್ದಾರೆ ಎಂದು ತಿಳಿದು ಬಂದಿದೆ.

ಬಳಿಕ ಈ ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಂಗಳಮುಖಿ ನಿಖಿಲಾ ಅವರು, ಮಂಗಳೂರಿನಲ್ಲಿ ರಾತ್ರಿ ವೇಳೆ ಸಿಂಗಲ್ ಸ್ಟಾರ್ ಪೊಲೀಸ್ ಅಧಿಕಾರಿ ನನ್ನನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದರು. ಹಣ ಕೊಡುತ್ತೇನೆ ಬಾ ಎಂದು ಕರೆದರು. ಯೂನಿರ್ಫಾಮ್ ಹಾಕಿದ್ದೀರಾ ಅಲ್ವಾ ಅದನ್ನು ಕಳಚಿ ಬನ್ನಿ ಎಂದು ಹೇಳಿದ್ದೆ. ಇದೇ ವಿಚಾರವನ್ನು ನಾನು ಸಭೆಯಲ್ಲಿ ನ್ಯಾಯಾಧೀಶರ ಮುಂದೆ ಹೇಳಿದ್ದೆ ಎಂದು ಸ್ಪಷ್ಟಪಡಿಸಿದರು.

ನ್ಯಾಯಾಧೀಶರ ಮುಂದೆ ಹೇಳಿಕೆ ಬಳಿಕ ನಿನ್ನೆ ಪೊಲೀಸ್ ಅಧಿಕಾರಿಗಳು ನನ್ನನ್ನು ಕಮೀಷನರ್ ಕಚೇರಿಗೆ ಕರೆದಿದ್ದರು. ನನ್ನ ಹೇಳಿಕೆಗಳನ್ನು ಪಡೆದು ದೂರು ಕೊಡಿ ಎಂದು ಹೇಳಿದ್ದಾರೆ. ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!