ಮಣಿಪಾಲ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಮಣಿಪಾಲ ಫೆ.24 (ಉಡುಪಿ ಟೈಮ್ಸ್ ವರದಿ): ಶಿವಳ್ಳಿ ಗ್ರಾಮದ ಮಂಜುಶ್ರೀ ನಗರದಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

ಸ್ಥಳೀಯ ನಿವಾಸಿ ಜ್ಯೋತಿ (33) ಆತ್ಮಹತ್ಯೆ ಮಾಡಿಕೊಂಡವರು. ಫೆ.22 ರಂದು ಬೆಳಿಗ್ಗೆ ತನ್ನ ಮಕ್ಕಳನ್ನು ಶಾಲೆಗೆ ಕಳುಹಿಸಿದ್ದ ಜ್ಯೋತಿ ಅವರು ಆ ಬಳಿಕ ಮನೆಯಲ್ಲಿ ಯಾರೂ ಇಲ್ಲದ ಸಮಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ಜ್ಯೋತಿ ಅವರ ಮಗ ಶಾಲೆಯಿಂದ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜ್ಯೋತಿ ಅವರ ಗಂಡ ಬಿಟ್ಟಿದ್ದು ಇದೇ ವೇದನೆಯಲ್ಲಿ ಅವರು ಜೀವನದಲ್ಲಿ ಜೀಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ಮಾವ ಸುರೇಶ ಅವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!