ಉಡುಪಿ ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು
ಉಡುಪಿ ಫೆ.24 : ಉಡುಪಿ ನಗರದ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿ ಇಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಕುಂದಾಪುರದ ಗೋಪಾಡಿ ನಿವಾಸಿ ಮಾರ್ಟಿನ್ ಪ್ರಸಾದ್ ಮಾಬೆನ್ ಎಂದು ಗುರುತಿಸಲಾಗಿದೆ. ಉಡುಪಿ ಕ್ಲಾಕ್ ಟವರ್ ಬಳಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ವ್ಯಕ್ತಿ ಮೃತಪಟ್ಟಿದ್ದರು. ಮೃತರ ಬಳಿ ಸಿಕ್ಕ ಆಧಾರ್ ಕಾರ್ಡ್ ಆದಾರದ ಮೇಲೆ ವ್ಯಕ್ತಿ ಗುರುತು ಪತ್ತೆಹಚ್ಚಲಾಗಿದೆ.