ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಮತ್ತೊಂದು ಘೋಷಣೆ

ಬೆಂಗಳೂರು ಫೆ.24 : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ದೃಷ್ಟಿಯಿಂದ ವಿವಿಧ ಯೋಜನೆಗಳ ಘೋಷಣೆ ಮಾಡುತ್ತಿರುವ ಕಾಂಗ್ರೆಸ್ ಇದೀಗ ಮತ್ತೊಂದು ದೊಡ್ಡ ಘೋಷಣೆ ಮಾಡಿದೆ.

ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ರಾಜ್ಯದ ಬಿಪಿಎಲ್ ಪಡಿತರದಾರರಿಗೆ ತಿಂಗಳಿಗೆ 10 ಕೆ.ಜಿ ಉಚಿತ ಅಕ್ಕಿಯನ್ನು ಘೋಷಿಸಿದೆ.

ಈ ಹಿಂದೆ ಕಾಂಗ್ರೆಸ್ ರಾಜ್ಯದ ಮಹಿಳೆಯರಿಗೆ ತಿಂಗಳಿಗೆ ರೂ. 2000, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿತ್ತು. ಇದೀಗ ಸರಕಾರ ನೀಡುತ್ತಿರುವ 7 ಕೆ.ಜಿ ಅಕ್ಕಿ ಜೊತೆಗೆ ಕಾಂಗ್ರೆಸ್ 3 ಕೆಜಿ ಹೆಚ್ಚಿಸುವ ಭರವಸೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!