ಉಡುಪಿ: ಫೆ.26- ಬಂಟಕಲ್ಲಿನಲ್ಲಿ ಬೃಹತ್ ರಕ್ತದಾನ ಶಿಬಿರ

ಉಡುಪಿ ಫೆ.25 (ಉಡುಪಿ ಟೈಮ್ಸ್ ವರದಿ): ಲಯನ್ಸ್ ಕ್ಲಬ್, ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಬಂಟಕಲ್ಲು, ರೋಟರಿ ಕ್ಲಬ್ ಶಿರ್ವ ಮತ್ತು ಬಂಟಕಲ್ಲು ಪರಿಸರ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆ ರಕ್ತ ನಿಧಿ ಕೇಂದ್ರ ಇವರ ಸಹಯೋಗದೊಂದಿಗೆ ಫೆ.26 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ಬ್ರಹ್ಮತ್ ರಕ್ತದಾನ ಶಿಬಿರವನ್ನು ಬಂಟಕಲ್ಲಿನ ಶ್ರೀ ವಿಶ್ವಕರ್ಮ ಸಂಘದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ್ ಉಡುಪ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ರತನ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ವೇಳೆ ಮುಖ್ಯ ಅತಿಥಿಗಳಾಗಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, 317ಸಿ ಯಾ ಲಯನ್ಸ್ ನ ಜಿಲ್ಲಾ ಗವರ್ನರ್ ಲ|ಡಾ| ಎಂ ಕೆ ಭಟ್., ಡಾ| ವೀಣಾ ಕುಮಾರಿ , ಲಯನ್ಸ್ ನ ಮಾಜಿ ಜಿಲ್ಲಾ ಗವರ್ನರ್ ಲ|ಎನ್ ,ಎಮ್ ಹೆಗಡೆ, ಮಾಧವ ಕಾಮತ್ ಬಂಟಕಲ್ಲು , ಲ| ವಿದ್ಯಾಲತ ಶೆಟ್ಟಿ , ಉಡುಪಿ, ಕೆ ಸಿ ಅಮೀನ್ ,ಮಂಜುನಾಥ ಪೂಜಾರಿ ಮತ್ತು ಮುರಳಿಧರ ಅಚಾರ್ಯ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 9242494553, 9972232460 ಸಂಖ್ಯೆಯನ್ನು ಸಂಪರ್ಕಿಸುವಂತೆ ಆಯೋಜಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!