ಅಂಕಪಟ್ಟಿ ನೀಡಲು ವಿಳಂಬ-ಬೆಂಕಿ ಹಚ್ಚಿ ಪ್ರಾಂಶುಪಾಲರನ್ನೇ ಕೊಂದ ವಿದ್ಯಾರ್ಥಿ

ಮಧ್ಯಪ್ರದೇಶ ಫೆ.25 : ಇಂದೋರ್ ಶಾಲೆಯೊಂದರಲ್ಲಿ ಅಂಕಪಟ್ಟಿ ಕೊಡಲು ವಿಳಂಬ ಮಾಡಿದರು ಎಂದು ವಿದ್ಯಾರ್ಥಿಯೊಬ್ಬ ಮಹಿಳಾ ಪ್ರಾಂಶುಪಾಲರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ನಡೆದಿದೆ.

ಫೆಬ್ರವರಿ 20 ರಂದು ಬಿಎಂ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ವಿಮುಕ್ತ ಶರ್ಮಾ ಮೇಲೆ ಮಾಜಿ ವಿದ್ಯಾರ್ಥಿ ಅಶುತೋಷ್ ಶ್ರೀವಾಸ್ತವ (24) ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಪರಿಣಾಮ ವಿಮುಕ್ತ ಅವರು ಶೇ. 90ರಷ್ಟು ಸುಟ್ಟ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚೋಯಿತ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ವಿಮುಕ್ತ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

‘ತನಿಖೆಯ ಸಮಯದಲ್ಲಿ, ಶ್ರೀವಾಸ್ತವ ವಿರುದ್ಧ ಫಾರ್ಮಸಿ ಕಾಲೇಜು ಅಧಿಕಾರಿಗಳು, ಮಹಿಳಾ ಪ್ರಾಂಶುಪಾಲರು ಮತ್ತು ಇತರ ಸಿಬ್ಬಂದಿ ಆರೋಪಿಗಳು ಆತ್ಮಹತ್ಯೆ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ಎರಡು ಮೂರು ದೂರುಗಳನ್ನು ನೀಡಿರುವುದು ನಮಗೆ ಕಂಡುಬಂದಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಭಗವತ್ ಸಿಂಗ್ ವಿರ್ಡೆ ಅವರು ಮಾಧ್ಯಮವೊಂದಕ್ಕೆ ಮಾಹಿತಿ ತಿಳಿಸಿದ್ದಾರೆ. ಇಂದೋರ್ ಆಡಳಿತವು ಅಶುತೋಷ್ ಶ್ರೀವಾಸ್ತವ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‍ಎಸ್‍ಎ) ಮೂಲಕ ವಿಚಾರಣೆ ಪ್ರಾರಂಭಿಸಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!