ಮಂಗಳೂರು: ಫೆ.26- ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

ಮಂಗಳೂರು, ಫೆ.25 : ಇಲ್ಲಿನ ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಫೆ.26 ರಂದು ಬೆಳಿಗ್ಗೆ 9 ಗಂಟೆಗೆ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಸಂಜೆ 5 ಗಂಟೆಗೆ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದ್ದು, ಬೆಳಿಗ್ಗೆ 9 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದ ನೂತನ ಪೆವಿಲಿಯನ್ ಉದ್ಘಾಟನೆ ಹಾಗೂ 10 ಗಂಟೆಗೆ ನಗರದ ಹೊಗೈ ಬಜಾರ್ ನಲ್ಲಿರುವ ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಉದ್ಘಾಟಿಸಲಿದ್ದಾರೆ.

ಸಂಜೆ 5 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಲಾಭಿಮುಖ ಪ್ರದೇಶ ಅಭಿವೃದ್ಧಿ ಶಂಕು ಸ್ಥಾಪನೆ, ಸಂಜೆ 5.30ಕ್ಕೆ ಕೇಂದ್ರ ಮಾರುಕಟ್ಟೆ ಶಂಕು ಸ್ಥಾಪನೆ ಹಾಗೂ ಸಂಜೆ 6ಗಂಟೆಗೆ ಸುಲ್ತಾನ ಬತ್ತೇರಿ ಪ್ರದೇಶ ಅಭಿವೃದ್ಧಿ ಯೋಜನೆಯ ಶಂಕುಸ್ಥಾಪನೆ ಹಮ್ಮಿಕೊಳ್ಳಲಾಗಿದೆ.

ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅವರು ಅಧ್ಯಕ್ಷತೆ ವಹಿಸಲಿದ್ದು, ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಮೇಯರ್ ಜಯಾನಂದ ಅಂಚನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎ.ವಿ. ತೀರ್ಥರಾಮ, ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಉಪಮೇಯರ್ ಪೂರ್ಣಿಮಾ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಬೀದರ್ ನ ಕ.ಪ.ಪ.ಮೀ. ವಿ.ವಿಯ ಕುಲಪತಿ ಡಾ. ಕೆ.ಸಿ. ವೀರಣ್ಣ, ಪಾಲಿಕೆಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯ ಅಧ್ಯಕ್ಷೆ ಶಖಿಲ ಕಾವ, ತೆರಿಗೆ ನಿರ್ಧರಣೆ ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿಯ ಅಧ್ಯಕ್ಷ ಕಿಶೋರ್ ಕೊಟ್ಟಾರಿ, ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷೆ ನಯನ ಆರ್. ಕೋಟ್ಯಾನ್, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ರಘು ಸಾಲಿಯಾನ್, ಬೋಳಾರ ಕಾರ್ಪೊರೇಟರ್ ಭಾನುಮತಿ ಹೊಗೈ ಬಜಾರ್ ಕಾರ್ಪೊರೇಟರ್ ರೇವತಿ ಶಾಮ್ ಸುಂದರ್, ಬೋಳೂರು ಕಾರ್ಪೊರೇಟರ್ ಜಗದೀಶ್ ಶೆಟ್ಟಿ, ಮಣ್ಣಗುಡ್ಡ ವಾರ್ಡ್ ಕಾರ್ಪೊರೇಟರ್ ಸಂಧ್ಯಾ ಮೋಹನ್ ಆಚಾರ್ಯ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಮಂಡಳಿ ಸದಸ್ಯರು ಮತ್ತು ಮಂಗಳೂರು ನಗರಮಟ್ಟದ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!