ಉಡುಪಿ: ಸಂತೆಕಟ್ಟೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆ

ಉಡುಪಿ ಫೆ.27 (ಉಡುಪಿ ಟೈಮ್ಸ್ ವರದಿ): ಕಲ್ಯಾಣಪುರ ಸಂತೆಕಟ್ಟೆಯ ಮೌಂಟ್ ರೋಸರಿ ಆಂಗ್ಲ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಸಚಿನ್ ಎಸ್ ಆಚಾರ್ಯ ಅವರು ರಾಷ್ಟ್ರಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿ.ಪಂ. ಮೈಸೂರು ಇವರ ಸಹಯೋಗದಿಂದ ಫೆ. 19ರಿಂದ 22ರವರೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಭಾಗದ ಆತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಯೋಮಾನ 14ರ ಬಾಲಕರ ವಿಭಾಗದಲ್ಲಿ ಭಾಗವಹಿಸಿದ ಸಚಿನ್ ಎಸ್ ಆಚಾರ್ಯ ಅವರು 80ಮೀ ಹರ್ಡಲ್ಸ್‍ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!