ಚಿಕ್ಕಮಗಳೂರು: ಅಪ್ರಾಪ್ತ ವಯಸ್ಕ ಕ್ರೀಡಾಪಟುವಿಗೆ ಅಥ್ಲೆಟಿಕ್ ಕೋಚ್ ನಿಂದ ಲೈಂಗಿಕ ಕಿರುಕುಳ-ದೂರು ದಾಖಲು

ಚಿಕ್ಕಮಗಳೂರು ಫೆ.28 : ಅಪ್ರಾಪ್ತ ವಯಸ್ಕ ಕ್ರೀಡಾಪಟುವಿಗೆ ಅಥ್ಲೆಟಿಕ್ ತರಬೇತುದಾರ ಲೈಂಗಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ. 

ಜಿಲ್ಲಾ ಕ್ರೀಡಾ ಅಥ್ಲೆಟಿಕ್ಸ್ ತರಬೇತುದಾರ ಭರತ್. ಎಸ್ ಪ್ರಕರಣದ ಆರೋಪಿ.  ಈ ಬಗ್ಗೆ ಬಾಲಕಿ ತನ್ನ ತಾಯಿಯ ಬಳಿ ವಿಚಾರ ತಿಳಿಸಿದ್ದು, ಬಳಿಕ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಗೆ ದೂರು ನೀಡಲಾಗಿದೆ. ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭರತ್ ವಿರುದ್ಧ ಪೋಕ್ಸೋ ಕೇಸ್ ದಾಖಲು ಮಾಡಲಾಗಿದೆ. ಇತ್ತ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ತರಬೇತುದಾರ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

14 ವರ್ಷದ ರಾಷ್ಟ್ರೀಯ ಮಹಿಳಾ ಟ್ರಯಾಥ್ಲಾನ್ ಕ್ರೀಡಾ ಪಟು ದೂರು ನೀಡಿದ್ದು, ಬಿಹಾರದ ಪಾಟ್ನಾದಲ್ಲಿ‌ ಆಯೋಜಿಸಿದ್ದ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಆಯೋಜನೆ ಮಾಡಿದ್ದ ಕ್ರೀಡಾಕೂಟದಲ್ಲಿ ತಂಡ ಭಾಗಿಯಾಗಿತ್ತು. ಕ್ರೀಡಾಕೂಟ ಮುಗಿಸಿ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಸ್ಸಿನಲ್ಲಿ ಬರುವಾಗ ಜಿಲ್ಲಾ ಯುವ ಸಬಲೀಕರಣ, ಕ್ರೀಡಾ ಇಲಾಖೆಯಯಲ್ಲಿ ಅಥ್ಲೆಟಿಕ್ಸ್ ತರಬೇತುದಾರ ಭರತ್.ಎಸ್ ಬಾಲಕಿಯ ಖಾಸಗಿ ಭಾಗಗಳನ್ನು ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ. ಅಲ್ಲದೆ ಯಾರಿಗೂ ತಿಳಿಸದಂತೆ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!