ಕಾರ್ಕಳ: ತಾಯಿ,ಮಗು ನಾಪತ್ತೆ

ಕಾರ್ಕಳ ಫೆ.28 (ಉಡುಪಿ ಟೈಮ್ಸ್ ವರದಿ): ಕಾರ್ಕಳ ತಾಲೂಕಿನ ಗಣಪತಿಕಟ್ಟೆ ದಿಡಿಂಬಿರಿ ನಿವಾಸಿ ಮಹಿಳೆಯೊಬ್ಬರು ತನ್ನ 3 ವರ್ಷದ ಮಗುವಿನೊಂದಿಗೆ ನಾಪತ್ತೆಯಾಗಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಣಪತಿಕಟ್ಟೆ ದಿಡಿಂಬಿರಿ ನಿವಾಸಿ ರಂಗಿತಾ (23) ಹಾಗೂ ಅವರ 3 ವರ್ಷದ ಮಗಳಾದ ಶಾನ್ವಿಕಾ ನಾಪತ್ತೆಯಾದವರು. ಫೆ.18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ರಂಗಿತಾ 150 ಸೆಂ.ಮೀ ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!