ಡಿ.ರೂಪಾ ವಿರುದ್ಧ ಕೋರ್ಟ್ ನಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿದ ರೋಹಿಣಿ ಸಿಂಧೂರಿ
ಬೆಂಗಳೂರು, ಮಾ.1 : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಪತಿ ಸುಧೀರ್ ರೆಡ್ಡಿ ಜೊತೆ ಖುದ್ದು ನಗರದ 24ನೆ ಎಸಿಎಂಎಂ ಕೋರ್ಟ್ಗೆ ಹಾಜರಾಗಿದ್ದ ರೋಹಿಣಿ ಸಿಂಧೂರಿ, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಹಾಗೂ ತಡೆಯಾಜ್ಞೆ ಇದ್ದರೂ, ರೂಪಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುತ್ತಲೇ ಇದ್ದಾರೆ. ಅವಹೇಳನ ಬರವಣಿಗೆ ಪೋಸ್ಟ್ ಮಾಡುತ್ತಿದ್ದಾರೆ. ಕೆಲವೊಮ್ಮೆ ಮಾತನಾಡಿದರೆ ಪರವಾಗಿಲ್ಲ, ಪದೇ ಪದೇ ನನ್ನನ್ನೇ ಗುರಿಯಿಟ್ಟುಕೊಂಡು ಪೋಸ್ಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಅವರು ಚಾಮರಾಜನಗರ ಆಮ್ಲಜನಕ ಸಿಲಿಂಡರ್ ದುರಂತ ಪ್ರಕರಣದಲ್ಲಿ ಈಗಾಗಲೇ ಸರಕಾರ ತನಿಖೆ ನಡೆಸಿದೆ. ಸರಕಾರ ವರದಿ ನೀಡಿದ್ದರೂ ಉದ್ದೇಶ ಪೂರ್ವಕವಾಗಿ ಅವಮಾನ ಮಾಡುತ್ತಿದ್ದಾರೆ ಎಂದು ನ್ಯಾಯಾಧೀಶರ ಗಮನಕ್ಕೆ ತಂದರು. ಇನ್ನು ರೋಹಿನಿ ಸಿಂಧೂರಿ ಅವರ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠವು ವಿಚಾರಣೆಯನ್ನು ಮಾ.3ಕ್ಕೆ ಮುಂದೂಡಿದೆ ಎಂದು ತಿಳಿದು ಬಂದಿದೆ.
We pray soon Rohini Sinduri will win her case against Mrs Roopa in this court of justice