ಮಾ.9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-ಹಿಜಾಬ್ಗೆ ನಿರ್ಬಂಧ
ಬೆಂಗಳೂರು ಮಾ.1 : ರಾಜ್ಯದಲ್ಲಿ ಮಾ.9 ರಿಂದ ಆರಂಭಗೊಳ್ಳಲಿರುವ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿಗಳಿಗೆ ಬರೆಯಲು ಮತ್ತು ಅಧಿಕಾರಿಗಳು ಪರೀಕ್ಷೆಯ ಕರ್ತವ್ಯ ನಿರ್ವಹಿಸಲು ಅವಕಾಶ ಇಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ನಲ್ಲಿರುವ ಕಾರಣ ವಾರ್ಷಿಕ ಪರೀಕ್ಷೆಯ ವೇಳೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮತ್ತು ಪರೀಕ್ಷಾ ಕರ್ತವ್ಯದಲ್ಲಿರುವ ಅಧಿಕಾರಿಗಳು ಧರಿಸಲು ಅನುಮತಿಸುವ ಪ್ರಶ್ನೆಯೇ ಬರುವುದಿಲ್ಲ. ಈ ಕಾರಣಕ್ಕಾಗಿ ಪರೀಕ್ಷೆಗೆ ಗೈರಾಗುವ ವಿದ್ಯಾರ್ಥಿಗಳನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಈ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು, ವಿದ್ಯಾರ್ಥಿಗಳು, ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಸೂಚಿಸಿದ್ದಾರೆ.
Kashappayadav
Pls add on this group
supar