ನೇಣು ಬಿಗಿದು ಮಹಿಳೆ ಆತ್ಮಹತ್ಯೆ
ಹೆಬ್ರಿ: ನೇಣು ಬಿಗಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹೆಬ್ರಿಯ ವರಂಗ ಗ್ರಾಮದ ಮಾತಿಬೆಟ್ಟು ಎಂಬಲ್ಲಿ ನಡೆದಿದೆ. ಮಾಲಿನಿ (48) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಸುಮಾರು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು,
ಚಿಕಿತ್ಸೆ ನೀಡಿದ್ದರೂ ಗುಣಮುಖರಾಗಿರುವುದಿಲ್ಲ. ಫೆ.3 ರಂದು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರವುದಾಗಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.