ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ಹೊಸದಿಲ್ಲಿ ಮಾ.3 : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಜ್ವರದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನಿಯಾ ಗಾಂಧಿ ಅವರನ್ನು ಹೊಸದಿಲ್ಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ, “ಸೋನಿಯಾ ಗಾಂಧಿ ಅವರು ನಿಗಾದಲ್ಲಿದ್ದಾರೆ ಹಾಗೂ ಅವರು ತಪಾಸಣೆಗೆ ಒಳಗಾಗುತ್ತಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ” ಎಂದು ತಿಳಿಸಲಾಗಿದೆ.
ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ಸಲಹೆಗಾರ ಅರೂಪ್ ಬಸು ಹಾಗೂ ಅವರ ತಂಡದ ಮೇಲ್ವಿಚಾರಣೆಯಲ್ಲಿ ಸೋನಿಯಾ ಗಾಂಧಿ ಅವರನ್ನು “ಜ್ವರದ ಕಾರಣ” ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರ್ ಗಂಗಾರಾಮ್ ಆಸ್ಪತ್ರೆಯ ಟ್ರಸ್ಟ್ ಸೊಸೈಟಿಯ ಅಧ್ಯಕ್ಷ ಡಿ.ಎಸ್. ರಾಣಾ ಹೇಳಿದರು.