ಲೋಕಾಯುಕ್ತದಿಂದ ಪುತ್ರನ ಬಂಧನ: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ರಾಜಿನಾಮೆ

ಬೆಂಗಳೂರು ಮಾ.3 : ಲೋಕಾಯುಕ್ತ ದಾಳಿ ವೇಳೆ ಮನೆಯಲ್ಲಿ 6 ಕೋಟಿ ರೂ. ಪತ್ತೆ ಬಳಿಕ ಮಗ ಪ್ರಶಾಂತ್ ಮಾಡಾಳ್ ಬಂಧನದ ಬೆನ್ನಲ್ಲೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಇವರು ಸಲ್ಲಿಸಿರುವ ರಾಜಿನಾಮೆ ಪತ್ರದಲ್ಲಿ, ಗುರುವಾರ ನಡೆದ ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ.  ಇದು ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ನಡೆದಿರುವ ಷಡ್ಯಂತ್ರವಾಗಿದೆ. ಆದರೂ ನನ್ನ ಮೇಲೆ ಆರೋಪ ಬಂದಿರುವುದರಿಂದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‌ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!