ರಾಜ್ಯ ಆರೋಗ್ಯ ಇಲಾಖೆಯ NHM ನೌಕರರ ವೇತನ ಶೇ.15ರಷ್ಟು ಹೆಚ್ಚಳ: ಸರ್ಕಾರದ ಆದೇಶ
ಬೆಂಗಳೂರು ಮಾ.4 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಎ.1 ರಿಂದ ಜಾರಿಗೆ ಬರುವಂತೆ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಈ ಬಗ್ಗೆ ಆದೇಶ ಹೊರಡಿಸಿದ್ದು, ಶೇ.15ರಷ್ಟು ವೇತನ ಹೆಚ್ಚಳದ ಆದೇಶವು ಒಳಗುತ್ತಿಗೆ, ಗುತ್ತಿಗೆ ನೌಕರರಿಗೆ ಮಾತ್ರವೇ ಅನ್ವಯವಾಗಲಿದೆ. ಇದರ ಹೊರತಾಗಿ ಹೊರಗುತ್ತಿಗೆ ನೌಕರರಿಗೆ ಅನ್ವಯಿಸುವುದಿಲ್ಲ. ಈ ಶೇ.15ರಷ್ಟು ವೇತನ ಹೆಚ್ಚಳವು ಎನ್.ಹೆಚ್ ಎಂ.ಬಿ.ಬಿ.ಎಸ್, ಆಯುಷ್, ಆರ್ ಬಿ ಎಸ್ ಕೆ, ಡೆಂಟಲ್ ಸರ್ಜನ್ ಅವರು 5 ವರ್ಷ ಮೇಲ್ಪಟ್ಟಿ ನಿರಂತರ ಸೇವೆ ಸಲ್ಲಿಸಿದ್ದರೇ ಅವರಿಗೂ ಅನ್ವಯಿಸಲಿದೆ ಎಂದು ತಿಳಿಸಲಾಗಿದೆ.
ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿ ನೀಡಿರುವಂತ ಸಚಿವ ಡಾ.ಕೆ ಸುಧಾಕರ್ ಅವರು, ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ ಆದೇಶ ಮಾಡಿದ್ದು, ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಲಾಗಿದೆ ಎಂದಿದ್ದಾರೆ.
ಹಾಗೂ ಶ್ರೀ ಪಿ.ಎನ್.ಶ್ರೀನಿವಾಸಾಚಾರಿ ಸಮಿತಿಯ ಶಿಫಾರಸ್ಸಿನನ್ವಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ಮನವಿಗೆ ಸ್ಪಂದಿಸಿ ವೇತನ ಹೆಚ್ಚಳ ಮಾಡಿದ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೌಕರರ ಪರವಾಗಿ ಕೃತಜ್ಞತೆಗಳನ್ನು ತಿಳಿಸಿದ್ದಾರೆ.