ನಾನು ಲೋಕಾಯುಕ್ತ ಬಂದ್ ಮಾಡಿದ್ದೇ ಆದರೆ ರಾಜೀನಾಮೆ ಕೊಡುತ್ತೇನೆ -ಸಿದ್ದರಾಮಯ್ಯ

ಮೈಸೂರು, ಮಾ.6 : ನಾವು ಲೋಕಾಯುಕ್ತದ ಯಾವ ಅಧಿಕಾರವನ್ನೂ ಕಿತ್ತುಕೊಂಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ನಮ್ಮ ಕಾಲದಲ್ಲೂ ಲೋಕಾಯುಕ್ತ ಇತ್ತು. ಎಲ್ಲಾ ಸತ್ಯ ಗೊತ್ತಿದ್ದರು ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ. ನಾವು ಭ್ರಷ್ಟಾಚಾರ ನಿಗ್ರಹಕ್ಕೆ ಎಸಿಬಿ ರಚನೆ ಮಾಡಿದ್ದೆವು. ನಾವು ಲೋಕಾಯುಕ್ತದ ಯಾವ ಅಧಿಕಾರವನ್ನೂ ಕಿತ್ತುಕೊಂಡಿಲ್ಲ ಎಂದರು.

ಇನ್ನು ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಎಸಿಬಿ ರದ್ದು ಮಾಡಿದ್ದು ಬಿಜೆಪಿ ಸರ್ಕಾರವಲ್ಲ. ನ್ಯಾಯಾಲಯ ಎಸಿಬಿ ರದ್ದು ಮಾಡಿದ್ದು. ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ ಎಂದು ವಾಗ್ದಾಳಿ ನಡೆಸಿದ ಅವರು, ನಾನು ಲೋಕಾಯುಕ್ತ ಬಂದ್ ಮಾಡಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದೇ ಆದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!