ಮಡಾಳ್ ವಿರೂಪಾಕ್ಷಪ್ಪರನ್ನು ಪಕ್ಷದಿಂದ ಉಚ್ಚಾಟನೆ ಮಾಡಿಲ್ಲ- ಸಿಟಿ ರವಿ ಸ್ಪಷ್ಟನೆ

ಬೆಂಗಳೂರು ಮಾ.8 : ಟೆಂಡರ್ ಗಾಗಿ ಲಂಚ ಬೇಡಿಕೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದ ಬೆನ್ನಲ್ಲೇ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂಬ ಸುದ್ದಿಗಳು ಮಾಧ್ಯಮದಲ್ಲಿ ಹರಿದಾಡುತ್ತಿದ್ದವು.

ಇದೀಗ ಈ ಸುದ್ದಿಗಳಿಗೆ ಸ್ಪಷ್ಟಣೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು, ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿಲ್ಲ, ಮಾಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಪ್ರಾಥಮಿಕ ತನಿಖಾ ವರದಿ ಬಂದ ಬಳಿಕ ಉಚ್ಚಾಟನೆ ಮಾಡುವ ಬಗ್ಗೆ ಕ್ರಮ ವಹಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!