ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಭಾರೀ ಮೊತ್ತದ ದೇಣಿಗೆ ನೀಡಿದ ಕಾಂಗ್ರೆಸ್ ನಾಯಕಿ
ಲಕ್ನೋ: ಅಯೋಧ್ಯೆಯಲ್ಲಿ ಭರದಿಂದ ನಡೆಯುತ್ತಿರುವ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಕಾಂಗ್ರೆಸ್ ನಾಯಕಿಯೊಬ್ಬರು ಭಾರೀ ಮೊತ್ತದ ದೇಣಿಗೆ ನೀಡಿ ಭಾರೀ ಸುದ್ದಿಯಾಗಿದ್ದಾರೆ.
ಉತ್ತರ ಪ್ರದೇಶದ ರಾಯ್ ಬರೇಲಿ ಕಾಂಗ್ರೆಸ್ ಶಾಸಕಿ ಆದಿತಿ ಸಿಂಗ್ ಅವರು ರಾಮ ಮಂದಿರ ನಿರ್ಮಾಣಕ್ಕೆ 51 ಲಕ್ಷ ಮೊತ್ತವನ್ನು ದೇಣಿಗೆಯಾಗಿ ನೀಡಿದ್ದಾರೆ. ಈ ಹಣವನ್ನು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಜ್ ಅವರಿಗೆ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ದೇಣಿಗೆಯಾಗಿ ನೀಡುವುದಾಗಿ ಅವರು ತಿಳಿಸಿದ್ದಾರೆ.