ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಗೆ ನನ್ನ ಬೆಂಬಲ-ಸುಮಲತಾ ಘೋಷಣೆ

ಮಂಡ್ಯ, ಮಾ.10 : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನನ್ನ ಬೆಂಬಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಘೋಷಿಸಿದ್ದಾರೆ.

ಮಂಡ್ಯದ ಚಾಮುಂಡೇಶ್ವರಿಯಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ನಾನು ಮೋದಿಯವರ ನಾಯಕತ್ವದ ಮೇಲೆ ನಂಬಿಕೆ ಇಟ್ಟಿದ್ದೇನೆ. ಅವರ ನೇತೃತ್ವದಲ್ಲಿ ದೇಶ ಅಭಿವೃದ್ದಿ ಹೊಂದುತ್ತಿದೆ. ಹೀಗಾಗಿ ಅವರ ನೇತೃತ್ವದ ಸರ್ಕಾರಕ್ಕೆ ನಾನು ಬೆಂಬಲಿಸುತ್ತೇನೆ. ನನ್ನ ಹಲವು ಯೋಜನೆಗಳಿಗೆ ಕೇಂದ್ರ ಸರ್ಕಾರ ನೆರವು ನೀಡಿದೆ. ಮೋದಿ ನಾಯಕತ್ವದಿಂದ ದೇಶ ಅಭಿವೃದ್ದಿಗೊಳ್ಳಲು ಖಂಡಿತಾ ಸಾಧ್ಯವಿದೆ. ಮಂಡ್ಯದ ಅಭಿವೃದ್ದಿಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿಯನ್ನು ಬೆಂಬಲಿಸುವ ನಿರ್ಧಾರ ಮಾಡಿದ್ದೇನೆ ಎಂದು ತಿಳಿಸಿದರು.

ಇದೇ ವೇಳೆ ಬಿಜೆಪಿ ಸೇರ್ಪಡೆಯಾಗುವ ವಿಚಾರ ಸದ್ಯಕ್ಕಿಲ್ಲ ಎಂದ ಅವರು, ಅದಕ್ಕೆ ಕೆಲವೊಂದು ತಾಂತ್ರಿಕ ಅಡಚಣೆಗಳಿವೆ. ಆದರೆ ಮಂಡ್ಯದ ಅಭಿವೃದ್ದಿಗಾಗಿ ಬಿಜೆಪಿ ಬೆಂಬಲಿಸುವ ನಿರ್ಧಾರ ನನ್ನದು. ಅಂಬರೀಶ್ ಹೆಸರಿಗಾಗಲೀ, ಮಂಡ್ಯಕ್ಕಾಗಲೀ ಕಳಂಕ ತರುವ ಕೆಲಸ ನಾನು ಮಾಡಲಾರೆ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

error: Content is protected !!