ಕಾಪು: ಆಂಬ್ಯುಲೆನ್ಸ್, ಬೈಕ್ ಅಪಘಾತ-ಸವಾರ ಮೃತ್ಯು
ಕಾಪು ಮಾ.13 : ಕಾಪು ಠಾಣಾ ವ್ಯಾಪ್ತಿಯಲ್ಲಿ ಆಂಬ್ಯುಲೆನ್ಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಉಚ್ಚಿಲ ನಿವಾಸಿ ರಿತೇಶ್ (24) ಮೃತ ಯುವಕ. ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಆಂಬುಲೆನ್ಸ್ ಮತ್ತು ಉಚ್ಚಿಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ರಿತೇಶ್ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.