ನನಗೆ ಇರುವ ನಿಯಮ ಎಲ್ಲರಿಗೂ ಅನ್ವಯಿಸಬೇಕಲ್ಲವೇ? : ವಿ.ಸೋಮಣ್ಣ ಅಸಮಾಧಾನ

ಬೆಂಗಳೂರು, ಮಾ.13 : ನಾನು ಯಾವತ್ತೂ ನನ್ನ ಮಕ್ಕಳನ್ನು ರಾಜಕಾರಣಕ್ಕೆ ತಂದವನಲ್ಲ. ನನಗೆ ಇರುವ ನಿಯಮ ಎಲ್ಲರಿಗೂ ಅನ್ವಯಿಸಬೇಕಲ್ಲವೇ? ಎಂದು ವಸತಿ ಸಚಿವ ವಿ.ಸೋಮಣ್ಣ  ಅವರು ತಮ್ಮ ಪಕ್ಷದ ವಿರುದ್ಧವೇ ಅಸಮಾಧಾನ ಹೊರ ಹಾಕಿದ್ದಾರೆ.

ಈ ಬಗ್ಗೆ ಇಂದು ವಿಧಾನ ಸೌಧದಲ್ಲಿ ಮಾತನಾಡಿದ ಅವರು, ನಾನು ಯಾವತ್ತಾದರೂ ನನ್ನ ಮಗನಿಗೆ ಟಿಕೆಟ್ ಕೇಳಿದ್ದೀನಾ? ನನಗೆ ಅಸಮಾಧಾನ ಇದೆ ಎಂದು ಎಲ್ಲಾದರೂ ಹೇಳಿದ್ದೀನಾ ಎಂದು ಪ್ರಶ್ನಿಸಿದ್ದಾರೆ. ಹಾಗೂ ಅವಕಾಶ, ಹಣೆಬರಹ ಇದ್ದರೆ ನನ್ನ ಮಗನಿಗೆ ಟಿಕೆಟ್ ಸಿಗುತ್ತದೆ. ಬೇರೆ ರಾಜಕಾರಣಿಗಳ ಮಕ್ಕಳು ರಾಜಕಾರಣದಲ್ಲಿ ಇರಬಹುದು. ನಾನು ಸನ್ಯಾಸಿ ಅಲ್ಲ. ಎಲ್ಲರಿಗೂ ತಮ್ಮ ಮಕ್ಕಳ ಮೇಲೆ ಪ್ರೀತಿ ಇರುತ್ತೆ. ನಾನು ಯಾವತ್ತೂ ನನ್ನ ಮಕ್ಕಳನ್ನು ರಾಜಕಾರಣಕ್ಕೆ ತಂದವನಲ್ಲ ಎಂದಿದ್ದಾರೆ. 

ರಾಜಕಾರಣದಲ್ಲಿ ಕವಲುದಾರಿಗಳು ಇರುತ್ತವೆ ಎಂದು ಅವರು, ನನಗೆ ಇರುವ ನಿಯಮ ಎಲ್ಲರಿಗೂ ಅನ್ವಯಿಸಬೇಕಲ್ಲವೇ?, ಬೇರೆ ರಾಜಕಾರಣಿಗಳ ಮಕ್ಕಳಿಗೆ ಟಿಕೆಟ್ ಇಲ್ಲ ಅಂದರೆ ನಮಗೂ ಬೇಡ. ಬಿಜೆಪಿಯಿಂದ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಇಲ್ಲ. ನಾಲ್ಕು ಗೋಡೆಗಳ ಮಧ್ಯೆ ಯಾರಿಗೆ ಏನು ಹೇಳಬೇಕೋ, ಅದನ್ನು ಹೇಳಿದ್ದೇನೆ ಎಂದರು ಹಾಗೂ ನನ್ನನ್ನು ಬೆಂಗಳೂರಿಗೆ ಮಾತ್ರ ಯಾಕೆ ಸೀಮಿತ ಮಾಡುತ್ತೀರಿ. ಪಕ್ಷ ನನಗೆ ಕೊಟ್ಟ ಎಲ್ಲ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಬಸವಕಲ್ಯಾಣ, ಸಿಂಧಗಿ, ಕೊಪ್ಪಳ ಸೇರಿದಂತೆ ಅನೇಕ ಕ್ಷೇತ್ರಗಳ ಉಪ ಚುನಾವಣೆಯ ಜವಾಬ್ದಾರಿ ನಿರ್ವಹಿಸಿದ್ದೇನೆ. ಲೋಕಸಭೆ ಚುನಾವಣೆ ವೇಳೆ ತುಮಕೂರಿನಲ್ಲಿ ಬಿಜೆಪಿ ಗೆಲ್ಲಿಸಿದ್ದೇನೆ ಎಂದರು.

Leave a Reply

Your email address will not be published. Required fields are marked *

error: Content is protected !!