ಮಂಡ್ಯ: ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ

ಮಂಡ್ಯ ಮಾ.13 : ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ಚಾರ್ಜ್ ಮಾಡುತ್ತಿದ್ದ ವೇಳೆ ಎಲೆಕ್ಟ್ರಿಕ್ ಸ್ಕೂಟರ್ ಒಂದು ಸ್ಫೋಟಗೊಂಡ ಘಟನೆ ಇಂದು ನಡೆದಿದೆ.

ಮುತ್ತುರಾಜ್​ ಎಂಬುವರಿಗೆ ಸೇರಿದ್ದ ಕಳೆದ 6 ತಿಂಗಳ ಹಿಂದೆ ಖರೀದಿಸಿದ್ದ ಎಲೆಕ್ಟ್ರಿಕ್​ ಸ್ಕೂಟರ್,​ ಮನೆಯೊಳಗೆ ಚಾರ್ಜ್ ಆಗುತ್ತಿದ್ದಾಗ ಪ್ಲಗ್ ಇನ್ ಮಾಡಿದ ಕೆಲವೇ ನಿಮಿಷಗಳಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಈ ವೇಳೆ ಕುಟುಂಬದ ಐವರು ಅದೃಷ್ಟವಶಾತ್ ಪಾರಾಗಿದ್ದಾರೆ.

ಘಟನೆಯಲ್ಲಿ 5 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಮತ್ತು ಉಪಕರಣಗಳು ಸುಟ್ಟುಹೋಗಿದೆ ಎಂದು ತಿಳಿದು ಬಂದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!