ಉಡುಪಿ: ಜಿಲ್ಲಾಸ್ಪತ್ರೆಯಿಂದ ರೋಗಿ ನಾಪತ್ತೆ
ಉಡುಪಿ ಮಾ.13 (ಉಡುಪಿ ಟೈಮ್ಸ್ ವರದಿ): ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಯೊಬ್ಬರು ಮಾ.10 ರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ.
ರವಿ (41) ನಾಪತ್ತೆಯಾದವರು. ಉಡುಪಿಗೆ ಕೆಲಸಕ್ಕೆಂದು ಬಂದಿದ್ದ ಇವರು ಮಾ.8 ರಂದು ಉದ್ಯಾವರದಲ್ಲಿ ಅಸ್ವಸ್ಥಗೊಂಡಿದ್ದರು. ಇವರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ರವರು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಅದೇ ದಿನ ಒಳರೋಗಿಯಾಗಿ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಇವರು ಮಾ.10 ರ ರಾತ್ರಿ ಜಿಲ್ಲಾಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದು, ಈವರೆಗೂ ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿದ್ದಾರೆ ಎಂಬುದಾಗಿ ರವಿ ಅವರ ತಾಯಿ ಶಾಂತವ್ವ ಬಸವರಾಜ ಹಿರಗಣ್ಣವರ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.