ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು ಮಾ.15 : ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಹಾಗೂ ಸಂಜೆಯ ಸಮಯದಲ್ಲಿ ಮೋಡಕವಿದ ವಾತಾವರಣವಿರಲಿದೆ ಎಚ್.ಎ.ಎಲ್.ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹಾಗೂ ಬಾಗಲಕೋಟೆಯಲ್ಲಿ 13.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.