ಉಡುಪಿ: ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ-ಲಕ್ಷಾಂತರ ರೂ. ನಷ್ಟ

ಉಡುಪಿ, ಮಾ.15 : ನಗರದ ಕಿನ್ನಿಮುಲ್ಕಿಯ ಸ್ವಾಗತಗೋಪುರ ಸಮೀಪದ ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಮುಂಜಾನೆ ಸುಮಾರು 12 ಗಂಟೆಗೆ ಗುಜರಿ ಅಂಗಡಿಯಲ್ಲಿದ್ದ ಪ್ಲಾಸ್ಟಿಕ್ ಮತ್ತು ಗುಜರಿ ವಸ್ತುಗಳಿಗೆ ಆಕಸ್ಮಿಕ ಬೆಂಕಿ ತಗುಲಿದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮದಳ ಸಿಬ್ಬಂದಿಗಳು ದೌಡಾಯಿಸಿ ಹರಸಾಹಸಟ್ಟು ಬೆಂಕಿ ನಂದಿಸಿದ್ದಾರೆ. ಆದರೆ ಬೆಂಕಿಯ ತೀವ್ರತೆಗೆ ಪ್ಲಾಸ್ಟಿಕ್ ಜೊತೆಗೆ ಗುಜರಿ ಸಾಮಾಗ್ರಿಗಳು, ಕಚ್ಚಾ ತೈಲಗಳು ಸುಟ್ಟು ಕರಕಲಾಗಿದೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!