ಉಡುಪಿ: ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರು, ಜಂಟಿ ಸಂಯೋಜಕರ ನೇಮಕ
ಉಡುಪಿ ಮಾ.15(ಉಡುಪಿ ಟೈಮ್ಸ್ ವರದಿ): ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಉಡುಪಿ, ಕಾಪು, ಕಾರ್ಕಳ, ಕುಂದಾಪುರ, ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿಗೆ “ಸಂಯೋಜಕರನ್ನು ಹಾಗೂ ಜಂಟಿ ಸಂಯೋಜಕರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಆದೇಶ ಹೊರಡಿಸಿದೆ.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರರಾದ ಅಲೆವೂರು ಹರೀಶ್ ಕಿಣಿಯವರ ಶಿಫಾರಸ್ಸಿನ ಮೇರೆಗೆ ಹಾಗೂ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ಎಂ.ಬಿ. ಪಾಟೀಲ್‍ರವರ ಅನುಮೋದನೆಯೊಂದಿಗೆ “ಸಂಯೋಜಕರನ್ನು ಹಾಗೂ ಜಂಟಿ ಸಂಯೋಜಕರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಸಹ ಅಧ್ಯಕ್ಷ ಮಂಜುನಾಥ ಭಂಡಾರಿ ಅವರು ಈ ಆದೇಶ ಹೊರಡಿಸಿದ್ದಾರೆ. ಹಾಗೂ ಈ ಕೂಡಲೇ ನೇಮಕಗೊಂಡಿರುವ ಸಂಯೋಜಕರು ಮತ್ತು ಜಂಟಿ ಸಂಯೋಜಕರು ಕಾರ್ಯೋನ್ಮುಖರಾಗಿ ತಮ್ಮ ಜವಾಬ್ದಾರಿ ವಹಿಸಿಕೊಂಡು ಪಕ್ಷ ಸಂಘಟನೆ, ಪಕ್ಷದ ತತ್ವ ಸಿದ್ಧಾಂತ, ಕಾಂಗ್ರೆಸ್ ಸರಕಾರದ ಸಾಧನೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಗಳನ್ನು ಜನರಿಗೆ ಮನದಟ್ಟು ಮಾಡುವ ರೀತಿಯಲ್ಲಿ ಪ್ರಚಾರ ಮಾಡಲು ನಿರ್ದೇಶಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಬಿಡುಗಡೆ ಮಾಡಿರುವ ಸಂಯೋಜಕರು ಮತ್ತು ಜಂಟಿ ಸಂಯೋಜಕರ ಹೆಸರುಗಳು ಹೀಗಿವೆ..
ಉಡುಪಿ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಗೆ ಸಂಯೋಜಕರಾಗಿ ಉಡುಪಿ ವಿಧಾನ ಸಭಾ ಕ್ಷೇತ್ರದ ಕೃಷ್ಣಮೂರ್ತಿ ಆಚಾರ್ಯ ಅವರನ್ನು ಹಾಗೂ ಜಂಟಿ ಸಂಯೋಜಕರಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಇದರ ಪ್ರಶಾಂತ್ ಪೂಜಾರಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನ ರಾಘವೇಂದ್ರ ಶೆಟ್ಟಿ ಕರ್ಜೆ ಇವರನ್ನು ನೇಮಕ ಮಾಡಲಾಗಿದೆ
ಕಾಪು ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿಗೆ ಸಂಯೋಜಕರಾಗಿ ಕಾಪು ವಿಧಾನ ಸಭಾ ಕ್ಷೇತ್ರದ ವಿಶ್ವಾಸ್ ಅಮೀನ್ ಅವರನ್ನು ಹಾಗೂ ಕಾಪು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಇದರ ಜಿತೇಂದ್ರ ಫುಟಾರ್ಡೋ ಮತ್ತು ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಇದರ ಚರಣ್ ವಿಠಲ್ ಕುದಿ ಅವರನ್ನು ಜಂಟಿ ಸಂಯೋಜಕರಾಗಿ ನೇಮಿಸಲಾಗಿದೆ
ಕಾರ್ಕಳ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಂಯೋಜಕರಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಸುಪ್ರೀತ್ ಶೆಟ್ಟಿ ಕೆದಿಂಜೆ ಅವರನ್ನು ಹಾಗೂ ಜಂಟಿ ಸಂಯೋಜಕರಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್‍ನ ಶುಭದ ರಾವ್ ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ನ ನವೀನ್ ಅಡ್ಯಂತಾಯ ಹೆಬ್ರಿ ಇವರನ್ನ ನೇಮಿಸಲಾಗಿದೆ.
ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಸಂಯೋಜಕರಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಕಾಶ್ಚಂದ್ರ ಶೆಟ್ಟಿ, ಜಂಟಿ ಸಂಯೋಜಕರಾಗಿ ಬೈಂದೂರು ಬ್ಲಾಕ್ ಕಾಂಗ್ರೆಸ್ ನಿಂದ ಸುಬ್ರಹ್ಮಣ್ಯ ಭಟ್ ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ ನಿಂದ ಭಾಸ್ಕರ್ ನಾಯಕ್ ಕರ್ಕುಂಜೆ ಅವರನ್ನು ನೇಮಿಸಲಾಗಿದೆ.
ಕುಂದಾಪುರ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಸಂಯೋಜಕರಾಗಿ ಅಶೋಕ್ ಪೂಜಾರಿ ಬಿಜಾಡಿ ಅವರನ್ನು ಹಾಗೂ ಜಂಟಿ ಸಂಯೋಜಕರಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ನ ಆಶಾ ಲೂಯಿಸ್ ಕರ್ವಾಲೊ ಮತ್ತು ಕೋಟ ಬ್ಲಾಕ್ ಕಾಂಗ್ರೆಸ್ ನ ವಾಸುದೇವ ಕೋಟ್ಯಾನ್ ಐರೋಡಿ ಇವರನ್ನ ನೇಮಿಸಲಾಗಿದೆ.