FDA ಪ್ರಶ್ನೆ ಪತ್ರಿಕೆ ಲೀಕ್ : ಆರೋಪಿ ಸೆರೆ
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಶಿವಲಿಂಗ ಪಾಟೀಲ್ ಬಂಧಿತ ಆರೋಪಿ. ಆರೋಪಿಯ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಆರೋಪಿಯನ್ನು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ್ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ ಈತ, ಒಂದು ವರ್ಷದ ಹಿಂದೆಯಷ್ಟೆ ತನ್ನ ಕೋಚಿಂಗ್ ಸೆಂಟರ್ನ್ನು ಮುಚ್ಚಿದ್ದನು. ಅಲ್ಲದೆ ಈತ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಬಂಧಿತ ಆರೋಪಿ ರಾಚಪ್ಪನಿಂದ ಪ್ರಶ್ನೆ ಪತ್ರಿಕೆ ತರಿಸಿಕೊಂಡು, ಆ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಅಭ್ಯರ್ಥಿಗಳಿಗೆ ನೀಡುತ್ತಿದ್ದ ಎಂದು ತಿಳಿಸಿದ್ದಾರೆ.