ಉಡುಪಿ: ದಿನಕರ ಕೆಂಜೂರು ಅವರಿಗೆ ಡಾಕ್ಟರೇಟ್ ಪದವಿ ಪ್ರಧಾನ

ಉಡುಪಿ ಮಾ.15(ಉಡುಪಿ ಟೈಮ್ಸ್ ವರದಿ): ಇತ್ತೀಚೆಗೆ ಡಾಕ್ಟರೇಟ್ ಪದವಿ ಪಡೆದ ಡಾ. ದಿನಕರ ಕೆಂಜೂರು ಅವರು ಮಂಗಳೂರು ವಿಶ್ವವಿದ್ಯಾನಿಲಯದ 41ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೂಟ್  ಅವರಿಂದ ಪಿ.ಎಚ್.ಡಿ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು. 

ಈ ಸಂದರ್ಭದಲ್ಲಿ ರಾಷ್ಟ್ರೀಯ ಮೌಲೀಕರಣ ಮತ್ತು ಮಾನ್ಯತಾ ಪರಿಷತ್ತು ಬೆಂಗಳೂರು ಇದರ ನಿರ್ದೇಶಕ ಎಸ್.ಸಿ ಶರ್ಮ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್ ಎಡಪಡಿತ್ತಾಯ, ಕುಲಸಚಿವರು, ಸಿಂಡಿಕೇಟ್ ಸದಸ್ಯರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!