ಉಡುಪಿ ಜಿಲ್ಲೆಯಲ್ಲಿ ಹೆಚ್ಚಿದ ತಾಪಮಾನ- ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆ

ಉಡುಪಿ, ಮಾ.16: ತಾಪಮಾನ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ಮಕ್ಕಳಿಗೆ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ಬಿಸಿಲಿನಲ್ಲಿ ಹೊರಾಂಗಣ ಆಟವನ್ನು ನಿಷೇಧಿಸಿ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿರುವ ಕಾರಣ ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಲಾಖೆಯು ಸುತ್ತೋಲೆ ಬಿಡುಗಡೆ ಮಾಡಿ ಮುಖ್ಯ ಶಿಕ್ಷಕರು, ಪೋಷಕರು, ಅಡುಗೆ ಸಿಬ್ಬಂದಿಗಳು ಹಾಗೂ ಪೋಷಕರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡಲಾಗಿದೆ.

ಅದರಂತೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ರವರೆಗೆ ಬಿಸಿಲಿನಲ್ಲಿ ಆಟವಾಡಬಾರದು, ಅಗತ್ಯ ಸಂದರ್ಭದಲ್ಲಿ ಹೊರಗೆ ಹೋಗಲೇಬೇಕಾದಾಗ, ಪಾದರಕ್ಷೆ, ಕೊಡೆ, ಟೊಪ್ಪಿ ಬಳಸುವುದು, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರನ್ನು ಆಗಾಗ ಕುಡಿಯಬೇಕು, ನಿಯಮಿತವಾಗಿ ಕೈ ತೊಳೆದು ಆಹಾರ ಸೇವಿಸಬೇಕು ಎಂದು ಸೂಚಿಸಲಾಗಿದೆ.

ಇನ್ನು ಅಡುಗೆ ತಯಾರಿ ಸಂದರ್ಭದಲ್ಲಿ ಕಿಟಕಿ ಬಾಗಿಲುಗಳನ್ನು ತೆರೆದಿಡಬೇಕು, ಸೊಪ್ಪು ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚು ಬಳಕೆ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!