ಉಡುಪಿ ಡಾ.ಟಿ.ಎಂ.ಎ.ಪೈ ಆಸ್ಪತ್ರೆ : ಮಹಿಳಾ ದಿನಾಚರಣೆ
ಉಡುಪಿ ಮಾ.16 : ಡಾ.ಟಿ.ಎಂ.ಎ ಪೈ ಆಸ್ಪತ್ರೆಯ ವಾರ್ಷಿಕ ದಿನಾಚರಣೆ ಮತ್ತು ಮಹಿಳಾ ದಿನದ ಆಚರಣೆಯನ್ನು ಉಡುಪಿಯ ಟೌನ್ ಹಾಲ್ ನಲ್ಲಿ ಆಚರಿಸಲಾಯಿತು.
ಈ ವೇಳೆ ಮಣಿಪಾಲ ಮಾಹೆಯ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಉಡುಪಿಯ ಜನತೆಗೆ ಉತ್ತಮ ಗುಣಮಟ್ಟದ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವಲ್ಲಿ ಡಾ.ಟಿ.ಎಂ.ಎ.ಪೈ ಆಸ್ಪತ್ರೆಯ ಮಹತ್ವದ ಪಾತ್ರದ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಸಮಾಜದ ಶ್ರೇಯೋಭಿವೃದ್ಧಿಗೆ ಸಕ್ರಿಯ ಕೊಡುಗೆ ನೀಡಿದ ವಿದ್ಯಾ ಆನಂದ್ ಮತ್ತು ಯಶಸ್ವಿ ಮಹಿಳಾ ಉದ್ಯಮಿ ಪ್ರಸನ್ನ ಪದ್ಮರಾಜ್ ಅವರನ್ನು ಸನ್ಮಾನಿಸಲಾಯಿತು.
ಹಿಂದಿನ ಮೂರು ವಾರಗಳಲ್ಲಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಆಯೋಜಿಸಿದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಬಳಿಕ ಡಾ.ಟಿ.ಎಂ.ಎ.ಪೈ ಆಸ್ಪತ್ರೆಯ ಸಿಬ್ಬಂದಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕೆಎಂಸಿ ಮಣಿಪಾಲದ ಡೀನ್ ಡಾ.ಪದ್ಮರಾಜ್ ಹೆಗ್ಡೆ ಮತ್ತು ಎಂ.ಎಂ.ಎಂ.ಸಿ ಮಣಿಪಾಲದ ಡೀನ್ ಡಾ.ಉಲ್ಲಾಸ್ ಕಾಮತ್, ಡಾ.ಪದ್ಮರಾಜ್ ಹೆಗ್ಡೆ, ಉಡುಪಿಯ ಡಾ.ಟಿ.ಎಂ.ಎ.ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್ ಉಮಾಕಾಂತ್ ಅವರು ಉಪಸ್ಥಿತರಿದ್ದರು.