ಮಲ್ಪೆ: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ

ಉಡುಪಿ ಮಾ.16 (ಉಡುಪಿ ಟೈಮ್ಸ್ ವರದಿ): ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಕೊಳ ಹಾಗೂ ವಡಭಾಂಡೇಶ್ವರ ವಾರ್ಡ್‍ಗಳಲ್ಲಿ ಸಭೆಯನ್ನು ನಡೆಸಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆಯನ್ನು ತೊಟ್ಟಂನಲ್ಲಿರುವ ಮಂಜುನಾಥೇಶ್ವರ ಭಜನಾ ಮಂದಿರದ ವಠಾರದಲ್ಲಿ ಮಾಡಲಾಯಿತು.

ಈ ವೇಳೆ ಮಾತನಾಡಿದ ರಮೇಶ್ ಕಾಂಚನ್ ಅವರು, ಬಿಜೆಪಿ ಸರ್ಕಾರವು ಜನರಿಗೆ ಆಶ್ವಾಸನೆ ನೀಡಿ, ಅದರ ತದ್ವಿರುದ್ಧವಾಗಿ ನಡೆಯುತ್ತಿದೆ. ದಿನಬಳಕೆ ವಸ್ತುಗಳ ಮೇಲೆ ಬೆಲೆ ಏರಿಕೆಯಿಂದ ಜನರು ಕಂಗೆಟ್ಟಿದ್ದಾರೆ. ಪೆಟ್ರೋಲ್, ಗ್ಯಾಸ್, ವಿದ್ಯುತ್, ಡಿಸೇಲ್‍ಗಳ ಬೆಲೆ ಏರಿಕೆಯಿಂದ ಜನರಿಗೆ ಜೀವನ ನಡೆಸುವುದು ಕಷ್ಟಕರವಾಗಿದೆ. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‍ಗಳನ್ನು ಬಿಡುಗಡೆಗೊಳಿಸಿ ಈ ಕಾರ್ಡನ್ನು ಬೂತ್‍ನ ಕಾರ್ಯಕರ್ತರು ಪ್ರತಿಯೊಂದು ಮನೆಗೆ ತಲುಪಿಸಿ ಕಾಂಗ್ರೆಸ್ ಪಕ್ಷದ 3 ಜನಪರ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯವನ್ನು ಜನರಿಗೆ ಮನದಟ್ಟು ಮಾಡಬೇಕು. ಈ ಯೋಜನೆಗಳಿಂದ ಜನಸಾಮಾನ್ಯರಿಗೆ ಬಹಳಷ್ಟು ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ದಿವಾಕರ್ ಕುಂದರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ನಾಯಕರಾದ ಮಹಾಬಲ ಕುಂದರ್, ಮುರಳಿ ಶೆಟ್ಟಿ, ನಾರಾಯಣ್ ಕುಂದರ್, ಸಂಧ್ಯಾ ತಿಲಕ್ ರಾಜ್, ಆಶಾ ಚಂದ್ರ ಶೇಖರ್, ಶರತ್ ಶೆಟ್ಟಿ, ಸತೀಶ್ ಕುಮಾರ್ ಮಂಚಿ, ಚಂದ್ರ ತೊಟ್ಟಂ, ಮಹಾಲಿಂಗ ಶ್ರೀಯಾನ್, ಪಾಂಡು ಕರ್ಕೇರ, ಗುಣವಂತ ತೊಟ್ಟಂ, ರಾಮೋಜಿ ಅಮೀನ್, ಯಾದವ್, ಸಂಧ್ಯಾ ಕೃಷ್ಣ, ಸೌಮಿತಾ, ಶಶಿಕಲಾ, ಓಂಕಾರ್, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಾಯಕರು, ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!