ಕುಂದಾಪುರ: ಲಾರಿ ಡಿಕ್ಕಿಹೊಡೆದು ಕೆಎಸ್ಸಾರ್ಟಿಸಿ ಬಸ್ ಪಲ್ಟಿ

ಕುಂದಾಪುರ ಮಾ.16 : ಲಾರಿಯೊಂದು ಕೆಎಸ್ಸಾರ್ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿ ಚಾಲಕ ಗಾಯಗೊಂಡ ಘಟನೆ ಕುಂದಾಪುರದ ಸಂತೆ ಮಾರ್ಕೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಬಸ್ ಚಾಲಕ ಭಾಸ್ಕರ್‌ ಎನ್‌ ನಾಯ್ಕ್‌ ಗಾಯಗೊಂಡವರು. ಕುಂದಾಪುರದ ಬಸ್ರೂರು ಮೂರುಕೈ ಬಳಿಯ ಕೆಎಸ್ಸಾರ್ಟಿಸಿ ಡಿಪ್ಪೋದಿಂದ ಹೊರಟು ಬಸ್ ನಿಲ್ದಾಣಕ್ಕೆ ತೆರಳುವ ವೇಳೆ ಕುಂದಾಪುರದ ಸಂತೆ ಮಾರುಕಟ್ಟೆ (ಹಳೆ ಆದರ್ಶ ಆಸ್ಪತ್ರೆ) ಎದುರಿನ ಡಿವೈಡರ್‌ನಲ್ಲಿ ಯೂ ಟರ್ನ್ ತೆಗೆದುಕೊಳ್ಳುವಾಗ ಉಡುಪಿ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕೆಎಸ್ಸಾರ್ಟಿಸಿ ಬಸ್ ಪಲ್ಟಿಯಾಗಿದೆ.

ಲಾರಿ ಚಾಲಕ ಈರಪ್ಪ ಆರ್‌ ಹಡಗಲಿ ಎನ್ನುವವರ ನಿರ್ಲಕ್ಷ್ಯ ಹಾಗೂ ಅತಿ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ  ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.  ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!