ಉಡುಪಿ: ಗಾಂಜಾ ಮಾರಾಟ-ಓರ್ವನ ಬಂಧನ

ಉಡುಪಿ ಮಾ.16(ಉಡುಪಿ ಟೈಮ್ಸ್ ವರದಿ): ಹೆರ್ಗಾ ಗ್ರಾಮದ ಈಶ್ವರ ನಗರದ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ನಿಂತಿದ್ದ ವ್ಯಕ್ತಿಯೋರ್ವನನ್ನು ಉಡುಪಿ ಸೆನ್ ಠಾಣೆಯ ಪೊಲೀಸರು ಇಂದು ಬಂಧಿಸಿದ್ದಾರೆ. 

ಬಬ್ಲು ಕುಮಾರ್ ಬಂಧಿತ ಆರೋಪಿ. ಬಂಧಿತನಿಂದ 30,000 ರೂ. ಮೌಲ್ಯದ 1 ಕೆ.ಜಿ. 102 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಹಾಗೂ ಒಂದು ಮೊಬೈಲ್ ನ್ನು  ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!