ರಾಜ್ಯದ ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಬೆಂಗಳೂರು ಮಾ.17 : ರಾಜ್ಯದಲ್ಲಿ ಬೇಸಿಗೆಯ ಬಿಸಿಯ ತಾಪದಿಂದ ಕಂಗೆಟ್ಟಿದ್ದ ಜನರಿಗೆ ಹಲವೆಡೆ ಮಳೆರಾಯ ತಂಪೆರೆದಿದ್ದಾನೆ. ಹಾಗೂ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿದಂತೆ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿನ್ನೆ ರಾಜ್ಯದ ನಿಪ್ಪಾಣಿ, ರಾಯಭಾಗ, ಸಕಲೇಶಪುರ ಸೇರಿದಂತೆ ಹಲವು ಸ್ಥಳಗಳಲ್ಲಿ ವರುಣ ಸಿಂಚನವಾಗಿದೆ. ಅಲ್ಲದೆ ಮುಂದಿನ 24 ಗಂಟೆಗಳಲ್ಲಿ ಬಾಗಲಕೋಟೆ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಸೂಚನೆ ನೀಡಿದೆ.
ಕರಾವಳಿ ಮತ್ತು ಇತರ ಪ್ರದೇಶಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಗಳಿವೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ. ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
No chance at coastal areas
Only Bangalore Kolar chikkaballpur and surrounding areas will get good rain today