ಮತ್ತೆ ಕೋವಿಡ್ ಸೋಂಕು ಹೆಚ್ಚಳ: ಕರ್ನಾಟಕ ಸೇರಿ 6 ರಾಜ್ಯಗಳಿಗೆ ಕೇಂದ್ರದಿಂದ ಪತ್ರ
ನವದೆಹಲಿ ಮಾ.17 : ದೇಶದಲ್ಲಿ ಮತ್ತೆ ಕೋವಿಡ್ ಸೋಂಕು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸೇರಿದಂತೆ 6 ರಾಜ್ಯಗಳಿಗೆ ಕೇಂದ್ರ ಸರಕಾರ ಪತ್ರ ಬರೆದಿದೆ.
4 ತಿಂಗಳ ಬಳಿಕ ಗುರುವಾರ ಒಂದೇ ದಿನದಲ್ಲಿ 700 ಕ್ಕೂ ಅಧಿಕ ಮಂದಿಗೆ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ 6 ರಾಜ್ಯಗಳಲ್ಲಿ ಕೊರೋನ ಪ್ರಕರಣಗಳ ದಿಢೀರ್ ಏರಿಕೆ ದಾಖಲಾಗುತ್ತಿದ್ದು, ಈ ಬಗ್ಗೆ ನಿಗಾವಹಿಸಿ, ಸೋಂಕು ತಡೆಗಟ್ಟುವ ಕ್ರಮವನ್ನು ಹೆಚ್ಚಿಸಲು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಹಾಗೂ ಕರ್ನಾಟಕ ರಾಜ್ಯಗಳಿಗೆ ಪತ್ರ ಬರೆದಿದ್ದಾರೆ. ಹಾಗೂ ಸೋಂಕು ಪರೀಕ್ಷೆ, ಚಿಕಿತ್ಸೆ, ಮೇಲ್ವಿಚಾರಣೆ ಹಾಗೂ ಲಸಿಕೆ ನೀಡಿಕೆಯನ್ನು ಹೆಚ್ಚಿಸಿ, ಖಚಿತಪಡಿಸಿಕೊಳ್ಳುವಂತೆ ಪತ್ರದಲ್ಲಿ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.