ಮಾ.19- ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಉದ್ಘಾಟನೆ

ಉಡುಪಿ, ಮಾ.17 :  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಉದ್ಘಾಟನಾ ಸಮಾರಂಭವು ಮಾ.19ರಂದು ಮಧ್ಯಾಹ್ನ 2ಗಂಟೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ತಿಳಿಸಿದ್ದಾರೆ.

ಈ ಬಗ್ಗೆ ಇಂದು ಉಡುಪಿಯ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು,  ಸಮಾರಂಭವನ್ನು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿದ್ದಾರೆ. ಈ ವೇಳೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕ ಉಪಾಧ್ಯಕ್ಷ ಎ.ಎಸ್.ಎನ್.ಹೆಬ್ಬಾರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಹಾಗೂ ಈ ಸಮಾರಂಭದಲ್ಲಿ ಸಂಘದ ಸ್ಥಾಪಕ ಪ್ರಧಾನ ಕಾರ್ಯದರ್ಶಿಯಾಗಿದ್ದ ಯು.ಎಸ್.ಶೆಣೈ ಅವರನ್ನು ಸನ್ಮಾನಿಸಲಾಗುವುದು. ಈ ಸಂದರ್ಭದಲ್ಲಿ ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ ಇದರ ಸದಸ್ಯರಾದ ಅರುಣ್ ಕುಮಾರ್ ಶಿರೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಅವರು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು,  ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!