ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಜಿಲ್ಲಾ ಗವರ್ನರ್ ಭೇಟಿ, ವಿವಿಧ ಯೋಜನೆಗಳು ಲೋಕಾರ್ಪಣೆ

ಉದ್ಯಾವರ ಮಾ.17 (ಉಡುಪಿ ಟೈಮ್ಸ್ ವರದಿ) : ಲಯನ್ಸ್ ಜಿಲ್ಲಾ 317c ಇದರ ಪ್ರತಿಷ್ಠಿತ ಕ್ಲಬ್ ಗಳಲ್ಲಿ ಒಂದಾಗಿರುವ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಗೆ ಲಯನ್ಸ್ ಜಿಲ್ಲೆಯ ಗವರ್ನರ್ ಲ. ಡಾ. ಎಂ ಕೆ ಭಟ್ ಎಂ.ಜೆ.ಎಫ್. ಮಾರ್ಚ್ 18ರಂದು ಅಧಿಕೃತ ಭೇಟಿ ನೀಡಲಿದ್ದು, ವಿವಿಧ ಯೋಜನೆಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಈ ಬಗ್ಗೆ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಜಿಲ್ಲೆಗೆ ಆಗಮಿಸುವ ಲಯನ್ಸ್ ಜಿಲ್ಲೆಯ ಗವರ್ನರ್ ಲ. ಡಾ. ಎಂ ಕೆ ಭಟ್ ಎಂ.ಜೆ.ಎಫ್  ಅವರನ್ನು ಉದ್ಯಾವರ ಬಲಾಯಿಪಾದೆ ರಿಕ್ಷಾ ನಿಲ್ದಾಣ ಬಳಿ ಸ್ವಾಗತಿಸಲಾಗುವುದು. ಬಳಿಕ ವಾಹನ ಮೆರವಣಿಗೆಯ ಮೂಲಕ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದಲ್ಲಿ ಅಳವಡಿಸಿರುವ ವಾಟರ್ ಪ್ಯೂರಿಫೈ ಉದ್ಘಾಟಿಸಲಿದ್ದಾರೆ. ಆ ನಂತರ ಹಿರಿಯ ನಾಗರಿಕರ ಕನಸಿನ ಮನೆಗೆ ಭೇಟಿ ನೀಡಿ ಅಲ್ಲಿಗೆ ಅಗತ್ಯವಿರುವ ಫ್ರಿಜ್ ಹಾಗೂ ಪಲ್ಲೋಟೈನ್, ಸ್ನೇಹಲಯಕ್ಕೆ  ಕ್ಲಬ್ಬಿನ ವತಿಯಿಂದ ವಿವಿಧ ದಿನಬಳಕೆಯ ವಸ್ತುಗಳನ್ನು  ಹತ್ತಾಂತರಿಸಲಿದ್ದಾರೆ ಎಂದು ತಿಳಿಸಿದೆ.

ಹಾಗೂ ಇದೇ ವೇಳೆ ಅವರು ಮೇಲ್ಪೇಟೆ ಬಿಲ್ಲವ ಮಹಾಜನ ಬಳಿ ಪ್ರಮುಖ ರಸ್ತೆಯ ಬದಿಯಲ್ಲಿ ಇರುವ ಕೆರೆಗೆ ನಿರ್ಮಿಸಿರುವ ತಡೆಗೋಡೆಯನ್ನು ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಎರಡು ಅಶಕ್ತ ಕುಟುಂಬಗಳಿಗೆ ಧನಸಹಾಯ ಹಾಗೂ ಇಬ್ಬರು ಅನಾರೋಗ್ಯ ಪಿಡಿತರಿಗೆ ವೀಲ್ ಚೇರ್ ನೀಡುವ ಕಾರ್ಯಕ್ರಮವು ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ.

ಐದು ವರ್ಷಗಳ ಹಿಂದೆ ಆರಂಭಗೊಂಡಿರುವ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ವಿವಿಧ ಜನ ಸೇವಾ ಕಾರ್ಯಕ್ರಮಗಳ ಮೂಲಕ ಜಿಲ್ಲೆಯಲ್ಲಿ ತನ್ನದೇ ಆದ ಯಶಸ್ವಿಯ ಮೈಲುಗಲ್ಲನ್ನು ಇಟ್ಟಿದೆ. ಪ್ರಸ್ತುತ ವರ್ಷ ಲ. ಅನಿಲ್ ಲೋಬೊ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದ್ದು, ಗವರ್ನರ್ ರವರ ಅಧಿಕೃತ ಭೇಟಿಯ ದಿನ ವಿವಿಧ ಸಮಾಜಮುಖಿ ಯೋಜನೆಗಳನ್ನು ಸಮಾಜಕ್ಕೆ ತಲುಪಿಸುವಲ್ಲಿ ರೂಪರೇಶೇಯನ್ನು ಸಿದ್ಧಪಡಿಸಿದ್ದಾರೆ ಎಂದು ಮಾಹಿತಿ ನೀಡಿದೆ. 

Leave a Reply

Your email address will not be published. Required fields are marked *

error: Content is protected !!