ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ನ ಅಂತರಾಷ್ಟ್ರೀಯ ಅಧ್ಯಕ್ಷರಾಗಿ ನವೀನ್ ಅಮೀನ್ ಆಯ್ಕೆ

ಕಟಪಾಡಿ ಮಾ.17: ತಾಲೂಕು ಪಂಚಾಯಿತಿ ಮಾಜಿ ಸದಸ್ಯ,ಉದ್ಯಮಿ ನವೀನ್ ಅಮೀನ್ ಶಂಕರಪುರ ಅವರು ಸೀನಿಯರ್ ಚೇಂಬರ್ ಇಂಟರ್‌ ನ್ಯಾಷನಲ್‌ನ ಅಂತಾರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕೇರಳದ ಮಾಹೆಯಲ್ಲಿ ನಡೆದ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರನ್ನು ಆಯ್ಕೆ ಮಾಡಲಾಯಿತು. ಇವರು ಜೆಸಿಐ ಶಂಕರಪುರ ಅಧ್ಯಕ್ಷ, ಸೀನಿಯರ್ ಚೇಂಬರ್‌ ಇಂಟರ್‌ ನ್ಯಾಷನಲ್ ಸಂಸ್ಥೆಯಲ್ಲಿ ರಾಷ್ಟ್ರೀಯ ಸಂಯೋಜಕ, ಶಂಕರಪುರ ರೋಟರಿ ಅಧ್ಯಕ್ಷ, ರೋಟರಿ ವಲಯ ಸೇನಾನಿ, ಸಹಾಯಕ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!