ಕಾಪು: ಮಾ.21-22: ಮಾರಿಗುಡಿಯಲ್ಲಿ ಕಾಲಾವಧಿ ಸುಗ್ಗಿ ಮಾರಿ ಪೂಜೆ

ಕಾಪು ಮಾ.18 : ಕಾಪುವಿನ ಮೂರು ಮಾರಿಗುಡಿಯಲ್ಲಿ ಏಕಕಾಲದಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಕಾಲಾವಧಿ ಸುಗ್ಗಿ ಮಾರಿ ಪೂಜೆಯು ಮಾ. 21 ಮತ್ತು 22ರಂದು ನಡೆಯಲಿದೆ. 

ಈ ಬಗ್ಗೆ ಮಾರಿಗುಡಿಯ ಆಡಳಿತ ಮಂಡಳಿಯು ಪ್ರಕಟನೆಯ ಮೂಲಕ ಮಾಹಿತಿ ನೀಡಿದ್ದು,  ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ ಮಾರಿಗುಡಿ ದೇವಸ್ಥಾನ ಸೇರಿ ಮೂರೂ ಮಾರಿಗುಡಿಗಳಲ್ಲಿ ನಡೆಯುವ ಸುಗ್ಗಿ ಮಾರಿಪೂಜೆ ಪ್ರಯುಕ್ತ ಮಾ. 21ರಂದು ರಾತ್ರಿ ಹಳೇ ಮಾರಿಗುಡಿಗೆ ವೆಂಕಟರಮಣ ದೇವಸ್ಥಾನದಿಂದ ಹಾಗೂ ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಗೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಮಾರಿಯಮ್ಮ ದೇವಿಯ ಬಿಂಬ ಮತ್ತು ಚಿನ್ನಾಭರಣಗಳನ್ನು ಮೆರವಣಿಗೆ ಮೂಲಕ ತಂದು ಗದ್ದೆಗೆಯೇರಿಸಿ ಮಾರಿಪೂಜೆಯ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಮಾ. 22ರಂದು ಸಂಜೆ ದರ್ಶನ ಸೇವೆ ನಡೆದು ಬಳಿಕ ಮಾರಿಯಮ್ಮ ದೇವಿಯ ಬಿಂಬವನ್ನು ವಿಸರ್ಜಿಸಲಾಗುತ್ತದೆ. ಮೂರೂ ಮಾರಿಗುಡಿಗಳಲ್ಲೂ ಮಾರಿಪೂಜೆಗಾಗಿ ವಿವಿಧ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಕಾಲಾವಧಿ ಸುಗ್ಗಿ ಮಾರಿಪೂಜೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಕಾಸರಗೋಡು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮುಂಬಯಿ, ಬೆಂಗಳೂರು ಹಾಗೂ ದೇಶ-ವಿದೇಶಗಳಿಂದಲೂ ಲಕ್ಷಾಂತರ ಮಂದಿ ಭಕ್ತರು ಪಾಲ್ಗೊಂಡು ವಿವಿಧ ಹರಕೆ, ಸೇವೆಗಳನ್ನು ಸಲ್ಲಿಸುತ್ತಾರೆ.

Leave a Reply

Your email address will not be published. Required fields are marked *

error: Content is protected !!