ಕಾರ್ಕಳದ ಶಿಲೆಯಿಂದ ಅಯೋಧ್ಯೆ ಶ್ರೀರಾಮನ ಮೂರ್ತಿ

ಕಾರ್ಕಳ ಮಾ.18 : ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಶ್ರೀರಾಮನ ಮೂರ್ತಿ ಕಾರ್ಕಳದ ಈದು ಗ್ರಾಮದ ಶಿಲೆ ಕಲ್ಲಿನಿಂದ ನಿರ್ಮಾಣವಾಗಲಿದೆ.

ಮೂರ್ತಿ ನಿರ್ಮಾಣಕ್ಕೆ ಯೋಗ್ಯ ಕಲ್ಲನ್ನು ಹುಡುವ ಕಾರ್ಯ ಹಲವು ತಿಂಗಳಿಂದ ನಡೆಯುತ್ತಿತ್ತು ಈ ಹಿನ್ನಲೆಯಲ್ಲಿ ಕೆಲವು ತಿಂಗಳುಗಳ ಹಿಂದೆ ಖ್ಯಾತ ಶಿಲಾ ತಜ್ಞ ಕುಶೀಪ್ ಬನ್ಸಾಲ್, ಸೇರಿದಂತೆ ಇತರ ತಜ್ಞರ ಜೊತೆಗೂಡಿ ಸ್ಥಳಿಯ ಭಜರಂಗದಳ ಕಾರ್ಯಕರ್ತರು ಕಾರ್ಕಳದ ನೆಲ್ಲಿಕಾರು ಶಿಲೆಯನ್ನು ಪರಿಶೀಲಿಸಿದ್ದರು. ಈ ಶಿಲೆಯು 10 ಟನ್ ತೂಕ, ಅಡಿ ಉದ್ದ, 6 ಅಡಿ ಅಗಲ ಮತ್ತು 4 ಅಡಿ ದಪ್ಪವಿದ್ದು ಯೋಗ್ಯ ಎನ್ನುವ ನಿಟ್ಟಿನಲ್ಲಿ ಅಯೋಧ್ಯೆಗೆ ಸಾಗಿಸುವ ಕಾರ್ಯಗಳು ನಡೆದಿವೆ.

ಈ ಶಿಲೆಯನ್ನು ಗುರುವಾರ ಕ್ರೇನ್ ಮೂಲಕ ಮೇಲಕ್ಕೆತ್ತಿ ಬಜಗೋಳಿ ಅಯ್ಯಪ್ಪ ಮಂದಿರಕ್ಕೆ ತಂದು ಅಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಯೋಧ್ಯೆಗೆ ಕಳುಹಿಸುವ ಕೆಲಸ ಮಾಡಲಾಗಿದೆ. ಈ ನಿಟ್ಟಿನಲ್ಲಿ ಈದು ಗ್ರಾಮದ ತುಂಗಾ ಪೂಜಾರಿಯವರ ಮನೆಯಿಂದ ನೆಲ್ಲಿಕಾರು ಶಿಲಾಕಲ್ಲನ್ನು ಬೃಹತ್ ಲಾರಿ ಮೂಲಕ ಅಯೋಧ್ಯೆಗೆ ಸಾಗಿಸಲಾಯಿತು. ಗಣ್ಯರ ಸಮ್ಮುಖದಲ್ಲಿ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!