ಹಿಂದುತ್ವ ವಿರುದ್ಧ ಫೋಸ್ಟ್ ಆರೋಪ: ನಟ ಚೇತನ್ ಬಂಧನ

ಬೆಂಗಳೂರು ಮಾ.21 : ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ನಟ ಚೇತನ್ ರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಹಲವು ಬಾರಿ ವಿಚಾರಣೆಗೆ ನೊಟೀಸ್ ನೀಡಿದ್ದರೂ ಗೈರು ಹಾಜರಾಗಿದ್ದರಿಂದ ಪೊಲೀಸರು ಇಂದು ಅವರನ್ನು ಬಂಧಿಸಿದ್ದಾರೆ.

ಸಂಘಪರಿವಾರದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಶಿವಕುಮಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ, ಇಂದು ಬೆಳಗ್ಗೆ  ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!